MLC ಚುನಾವಣೆಯಲ್ಲಿ NDA ಗೆಲುವು: ಕಾಂಗ್ರೆಸ್ ಸರ್ಕಾರದ ವಿರುದ್ಧ C. B. Suresh Babu ವಾಗ್ದಾಳಿ..!

MLC ಚುನಾವಣೆಯಲ್ಲಿ NDA ಗೆಲುವು: ಕಾಂಗ್ರೆಸ್ ಸರ್ಕಾರದ ವಿರುದ್ಧ C. B. Suresh Babu ವಾಗ್ದಾಳಿ..!

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ(NDA) ಗೆಲುವಿನ ಬೆನ್ನಲ್ಲೇ ಜೆಡಿಎಸ್ (JDS) ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು (C. B. Suresh Babu ) ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಜನರು ಗಮನಿಸುತ್ತಿದ್ದು, ಆಡಳಿತದ ಹಲವು ಹಂತಗಳಲ್ಲಿ ಸರ್ಕಾರ(Government)  ಎಡವಿದೆ ಎಂದು ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಎಲ್‌ಸಿ(MLC) ಚುನಾವಣಾ ಫಲಿತಾಂಶ, ಹಿರಿಯೂರು(Hiriyur) ಉಪಚುನಾವಣೆ, ಕೆಪಿಎಸ್‌ಸಿ (KPSC)ವಿವಾದ ಹಾಗೂ ರೈತರ ಸಮಸ್ಯೆಗಳ ಕುರಿತು ಪ್ರತಿಕ್ರಿಯಿಸಿದರು. ಅಲ್ಲದೆ, ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆಯನ್ನೂ ಪ್ರಶ್ನಿಸಿದರು.

ಎಂಎಲ್‌ಸಿ ಚುನಾವಣೆಯಲ್ಲಿ ಎನ್‌ಡಿಎ ಗೆಲುವು: ಸರ್ಕಾರದ ವಿರುದ್ಧ ಸುರೇಶ್ ಬಾಬು ಟೀಕೆ

ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮೂರು ಹಾಗೂ ಜೆಡಿಎಸ್ ಒಂದು ಸ್ಥಾನ ಗೆದ್ದಿವೆ. ಈ ಮೂಲಕ ಎನ್‌ಡಿಎ ಮೈತ್ರಿಕೂಟ ನಾಲ್ಕೂ ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ.ಈ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಸುರೇಶ್ ಬಾಬು, ರಾಜ್ಯ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಜನಾಭಿಪ್ರಾಯದಿಂದಲೇ ತಿಳಿಯಲು ಸಾಧ್ಯ ಎಂದು ಹೇಳಿದರು.ರಾಜ್ಯದ ಶಿಕ್ಷಕರು ಹಾಗೂ ಪದವೀಧರ ಮತದಾರರ ತೀರ್ಪು ಸರ್ಕಾರದ ಕಾರ್ಯವೈಖರಿಯ ಬಗ್ಗೆ ಅಸಮಾಧಾನವನ್ನು ತೋರಿಸುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.ಇದಲ್ಲದೆ, ಸರ್ಕಾರ ಎಲ್ಲ ಹಂತಗಳಲ್ಲೂ ಎಡವಿದೆ ಎಂದು ಆರೋಪಿಸಿದರು.

ಹಿರಿಯೂರು ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಕಣಕ್ಕೆ

ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಸ್ಪರ್ಧಿಸಲಿವೆ ಎಂದು ಸಿ.ಬಿ. ಸುರೇಶ್ ಬಾಬು ತಿಳಿಸಿದರು.ಎರಡೂ ಪಕ್ಷಗಳ ನಾಯಕರು ಒಗ್ಗಟ್ಟಿನಿಂದ ಚುನಾವಣೆ ಎದುರಿಸುವ ತೀರ್ಮಾನ ಮಾಡಿದ್ದಾರೆ. ಹೀಗಾಗಿ, ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಹೇಳಿದರು.ಆದರೆ, ಎರಡೂ ಪಕ್ಷಗಳ ನಾಯಕರು ಟಿಕೆಟ್ ಆಕಾಂಕ್ಷಿಗಳಾಗಿರುವುದು ಸಹಜ. ಈ ಬಗ್ಗೆ ಉಭಯ ಪಕ್ಷಗಳ ವರಿಷ್ಠರು ಚರ್ಚಿಸಿ ಒಮ್ಮತದ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *