ನ್ಯಾಯಾಲಯ Proceedings ಬಹಿಷ್ಕರಿಸಿ Lawyers  ಪ್ರತಿಭಟನೆ..!

ನ್ಯಾಯಾಲಯ Proceedings ಬಹಿಷ್ಕರಿಸಿ Lawyers  ಪ್ರತಿಭಟನೆ..!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ವಕೀಲನ ಮೇಲೆ *ಲ್ಲೆ(Assault) ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ (Chikkaballapura ) ಜಿಲ್ಲಾ ಕೇಂದ್ರದ ವಕೀಲರು ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ (Protesta) ನಡೆಸಿದ್ದಾರೆ. ಗೌರಿಬಿದನೂರಿನ ವಕೀಲ ಸಣ್ಣಕ್ಕಿ ವೆಂಕಟರಮಣಪ್ಪ(Sannakki Venkataramanappa)  ಅವರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಚಾ*ವಿನಿಂದ *ಲ್ಲೆ (Assault) ನಡೆಸಿದ್ದಾನೆ ಎನ್ನಲಾಗಿದೆ. ಈ ಘಟನೆಯನ್ನು ಖಂಡಿಸಿದ ವಕೀಲರು(Lawyers)  ಆರೋಪಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ.

ಇದೇ ವೇಳೆ, ವಕೀಲರ ಸುರಕ್ಷತೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಇಂತಹ ದಾಳಿಗಳು ಮರುಕಳಿಸದಂತೆ ಪೊಲೀಸ್ (Police ) ಇಲಾಖೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಗೌರಿಬಿದನೂರಿನಲ್ಲಿ ವಕೀಲನ ಮೇಲೆ ಹಲ್ಲೆ ನಡೆದಿದ್ದು ಹೇಗೆ?

ಗೌರಿಬಿದನೂರು ನಗರದ ಹೃದಯ ಭಾಗದಲ್ಲಿರುವ ಕೃಷಿ ಗ್ರಾಮೀಣ ಸಹಕಾರ ಕಟ್ಟಡದ ಮೊದಲ ಮಹಡಿಯಲ್ಲಿ ವಕೀಲ ಸಣ್ಣಕ್ಕಿ ವೆಂಕಟರಮಣಪ್ಪ ಅವರ ಕಚೇರಿ ಇದೆ.ವರದಿಯ ಪ್ರಕಾರ, ವೆಂಕಟರಮಣಪ್ಪ ತಮ್ಮ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಒಳನುಗ್ಗಿದ್ದಾನೆ. ನಂತರ ಅವರ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ *ಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.ಆದರೆ, ದಾಳಿಗೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅಲ್ಲದೆ, ಆರೋಪಿಯ ಗುರುತು ಹಾಗೂ ಪ್ರಕರಣದ ಕಾನೂನು ಪ್ರಕ್ರಿಯೆಗೆ ಸಂಬಂಧಿಸಿದ ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ.

ನ್ಯಾಯಾಲಯ ಕಲಾಪ ಬಹಿಷ್ಕರಿಸಿ ವಕೀಲರ ಪ್ರತಿಭಟನೆ

ವಕೀಲ ಸಣ್ಣಕ್ಕಿ ವೆಂಕಟರಮಣಪ್ಪ ಅವರ ಮೇಲಿನ *ಲ್ಲೆ ಆರೋಪವನ್ನು ಖಂಡಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದ ವಕೀಲರು ಪ್ರತಿಭಟನೆ ನಡೆಸಿದರು.ಮೊದಲಿಗೆ ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿದ ವಕೀಲರು, ನಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.

ವಕೀಲರ ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಎನ್. ಭಾಸ್ಕರ್

ವಕೀಲರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿ ಎನ್. ಭಾಸ್ಕರ್ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿದರು.ಈ ವೇಳೆ, ವಕೀಲರ ಮೇಲಿನ *ಲ್ಲೆ ಪ್ರಕರಣದ ಕುರಿತು ಸಂಬಂಧಪಟ್ಟ ಇಲಾಖೆಗೆ ಮಾಹಿತಿ ತಲುಪಿಸಲಾಗುವುದು ಎಂದು ಭರವಸೆ ನೀಡಿರುವುದಾಗಿ ವರದಿಯಾಗಿದೆ.ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬದ್ಧ ಕ್ರಮ ಕೈಗೊಳ್ಳುವ ಭರವಸೆಯನ್ನೂ ನೀಡಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *